Year | : | 1993 |
Publisher | : | Sahitya Bhandara, Bengaluru |
Reprints | : | 9 |
ತನ್ನೂರು ಬಸವನಪುರದ ಚನ್ನಕೇಶವ ದೇವಾಲಯದಲ್ಲಿದ್ದ ದೊಡ್ಡ ಸರಸ್ವತಿ ವಿಗ್ರಹವನ್ನು ಕಳ್ಳಸಾಗಾಣೆದಾರರು ಮಾಯ ಮಾಡಿದ್ದಾರೆಂಬ ಸುದ್ದಿ ತಿಳಿದ ಪ್ರತ್ರಿಕಾಸಂಪಾದಕ ರವೀಂದ್ರ ಅಲ್ಲಿಗೆ ಹೋಗುತ್ತಾನೆ .ಅಲ್ಲಿಂದ ಆರಂಭವಾಗಿ ಇಡೀ ಸ್ವಾತಂತ್ರ್ಯೋತ್ತರ ಭಾರತದ ನಾಡಿಯ ಕಥೆಯು ಬೆಳೆಯುತ್ತದೆ. ಬೆಂಗಳೂರು, ಬಸವನಪುರ, ಜೋಗಿ ಹಳ್ಳಿ, ಮೈಸೂರು, ದಿಲ್ಲಿ, ಬನಾರಸ್, ಪಟ್ಣ, ಕಲ್ಕತ್ತಾ…., ಸಂಗೀತ , ಶಿಕ್ಷಣ, ವೃತ್ತಪತ್ರಿಕೆ, ಉದ್ಯಮ, ನಿರ್ಯಾತ, ಮೊದಲಾದ ವ್ಯಾಪ್ತಿಗಳಿಗೆ ಪಾತ್ರಗಳ ಸ್ವಂತ ಅನುಭವದ ಮೂಲಕ ಜೀವ ಕೊಟ್ಟು ಆಕಾರದ ಐಕ್ಯವನ್ನು ಸಾಧಿಸಿ ಈ ಕಾದಂಬರಿಯು ಸಮಕಾಲೀನ ವಸ್ತುವನ್ನು ಕಲೆಯಾಗಿಸುವ ನಿರ್ಲಿಪ್ತಿಯನ್ನು ಪಡೆದಿದೆ.