Year | : | 1965 |
Publisher | : | Sahitya Bhandara, Bengaluru |
Reprints | : | 14 |
ಎಮ್.ಬಿ.ಬಿ.ಎಸ್. ಮಾಡಿದ ಒಬ್ಬ ತರುಣ ತನ್ನ ಹಳ್ಳಿಯಲ್ಲಿ ಗಾಂಧಿಯ ಮಾರ್ಗದಲ್ಲಿ ಸೇವೆ ಮಾಡತೊಡಗಿ ಜನಾದರಣೆ ಗಳಿಸುತ್ತಾನೆ. ಅವನ ಜನಾದರಣೆಯನ್ನು ಬಳಸಿಕೊಳ್ಳುವ ತಂತ್ರಹೂಡಿ ಆಳುವ ಪಕ್ಷವು ಇನ್ನೂ ಹೆಚ್ಚು ಸೇವೆ ಮಾಡುವ ಅವಕಾಶಗಳು ದೊರೆಯುತ್ತವೆಂಬ ಆಮಿಷ ಹೂಡಿ ಅವನನ್ನು ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸುತ್ತದೆ. ಚುನಾವಣಾ ಓಡಾಟದಲ್ಲಿ ತೊಡಗಿದ ಅವನು ಒಬ್ಬ ರೋಗಿಗೆ ಗಮನಕೊಡದೆ ಆ ರೋಗಿ ಸಾಯುತ್ತಾನೆ. ವ್ಯೆದ್ಯನು ಚುನಾವಣೆಯಲ್ಲಿ ಸೋಲುತ್ತಾನೆ. ಮಂತ್ರಿಗಳ ಚುನಾವಣಾ ಫಂಡಿಗೆ ತನ್ನ ಆದಾಯದಮಿತಿಮೀರಿ ಸಾಲಮಾಡಿ ಹಣ ಒದಗಿಸಿದ ಒಬ್ಬ ಕಿರು ಕಂಟ್ರಾಕ್ಟರು ಕೊನೆಗೆ ತಾನು ನಿರೀಕ್ಷಿಸಿದ ಕಂಟ್ರಾಕ್ಟು ಸಿಕ್ಕದೆ ಸಾಲ ತೀರಿಸಲಾರದೆ ದೊಡ್ಡಕೆರೆಯ ತೂಬಿಗೆ ಕಲ್ಲು ಕಟ್ಟಿಕೊಂಡು ಮುಳುಗಿ ಸಾಯುತ್ತಾನೆ.