SLB

ತಬ್ಬಲಿಯು ನೀನಾದೆ ಮಗನೆ

ಗೋವನ್ನು ಸರ್ವದೇವತೆಗಳ ಸ್ವರೂಪವೆಂದು ಪೂಜಿಸುವ ಕಾಳಿಂಗಜ್ಜ ಮತ್ತು ಅದು ಹಾಲು ಮಾಂಸಗಳನ್ನು ಕೊಡುವ ಪ್ರಾಣಿ ಮಾತ್ರ ಎಂದು ಭಾವಿಸುವ ಆಮೆರಿಕೆಯಿಂದ ಹಿಂತಿರುಗಿದ ಮೊಮ್ಮಗ, ಇವರ ಮೌಲ್ಯಸಂವೇದನೆಗಳ ನಡುವೆ ನಡೆಯುವ ತಿಕ್ಕಾಟವೇ ಈ ಕಾದಂಬರಿಯ ವಸ್ತು. ಪ್ರಾಯಶಃ ಭಾರತದ ಎಲ್ಲ ಭಾಷೆಗಳಲ್ಲೂ ಪ್ರಚಲಿತವಿರುವ ಗೋವಿನ ಹಾಡಿನ ಹಿನ್ನಲೆಯಲ್ಲಿ ಆರಂಭವಾಗುವ ಕಾದಂಬರಿಯು, ಭಾರತೀಯ ಸಂಸ್ಕೃತಿಯ ಮೂಲ ಬೇರುಗಳನ್ನು ಹಿನ್ನಲೆಯಲ್ಲಿ ಕಾಣಿಸುತ್ತದೆ. ಈ ಕೃತಿಯನ್ನಾಧರಿಸಿ ಕನ್ನಡ   ಮತ್ತು ಹಿಂದಿಯಲ್ಲಿ ನಿರ್ಮಿಸಿರುವ ಚಲನ ಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ಪಡೆದಿವೆ. ಈ […]

Read More

ಸಾರ್ಥ

ಸಾರ್ಥದ  ಮರ್ಮವನ್ನು  ತಿಳಿಯಲು ಮನೆ ಮಾರು ಬಿಟ್ಟುಹೋದ  ನಾಗಭಟ್ಟನು ತನ್ನ ಗುರಿಯಿಲ್ಲದ  ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ  ಹತ್ತಾರು ಧಾರ್ಮಿಕ, ಸಾಮಾಜಿಕ  ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ  ಪ್ರಭಾವಕ್ಕೊಳಗಾಗಿ  ಆಚ್ಚರಿಯ  ಜೀವನದರ್ಶನಕ್ಕೆ  ಸಾಕ್ಷಿಯಾಗುತ್ತಾನೆ . ‘ಸಾರ್ಥ’ ಕ್ರಿ .ಶ. ಎಂಟನೆಯ  ಶತಮಾನದ  ಭರತಖಂಡದಲ್ಲಿ ನಡೆಯಿತೆಂದು  ಕಲ್ಪಿಸಿಕೊಳ್ಳಬೇಕಾದ  ಸಂಗತಿಗಳನ್ನಾಧರಿಸಿದ  ಕಾದಂಬರಿ. ಆನೆ  ಕುದುರೆ ಹೇಸರಗತ್ತೆ   ನೂರಾರು  ಗಾಡಿಗಳ ಮೇಲೆ ವಾಣಿಜ್ಯ  ಪದಾರ್ಥಗಳನ್ನು  ಹೇರಿಕೊಂಡು  ವ್ಯಾಪಾರ  ಮಾಡುತ್ತ  ದೂರ ದೂರ ದೇಶಗಳಲ್ಲಿ  ಸಂಚರಿಸುವುದನ್ನು ಆ ಕಾಲದಲ್ಲಿ  ‘ಸಾರ್ಥ’ ಎನ್ನುತಿದ್ದರು .ಭಾರತದ  ಇತಿಹಾಸದ  ಒಂದು   […]

Read More

ಸಾಕ್ಷಿ

‘ಸಾಕ್ಷಿ’ಯು ಪುರಾಣ ಮತ್ತು ನಮ್ಮ ಈ ಇಂದ್ರಿಯ ವಾಸ್ತವ ಜಗತ್ತುಗಳನ್ನು ಜೋಡಿಸುವ ಮೂಲಕ ಮನುಷ್ಯನ ನೀತಿಯ ಬೇರುಗಳನ್ನು ಶೋಧಿಸುತ್ತದೆ. ನಿಜವೂ ನೀತಿಯ ನೆಲೆಯೋ, ನೀತಿಯು ನಿಜದ ನೆಲೆಯೋ ಎಂಬಂತಹ ಮೂಲಭೂತ ಪ್ರಶ್ನೆಗಳನ್ನು ಅರಗಿಸಿಕೊಂಡಿರುವ ಈ ಕಾದಂಬರಿಯ ಪಾತ್ರ ವೈಶಿಷ್ಟ್ಯ ರಚನಾ ವಿಧಾನ ಹಾಗು ಕಲಾತ್ಮಕ ಅನುಭವಗಳು ಭೈರಪ್ಪನವರ ಹಿಂದಿನ ಕಾದಂಬರಿಗಳಿಗಿಂತ ಮೂರು ಮೆಟ್ಟಿಲು ಮೇಲೆ ಹೋಗಿವೆ.

Read More

ಪರ್ವ

ವ್ಯಾಸ ಮಹರ್ಷಿಗಳ ‘ಮಹಾಭಾರತ’ವನ್ನು ಆಧಾರವಾಗಿಟ್ಟುಕೊಂಡು  ರಚಿತವಾಗಿರುವ ಕಾದಂಬರಿ ‘ಪರ್ವ’. ಇದೊಂದು ಮರುಸೃಷ್ಟಿ. ಕಾವ್ಯ ಇತಿಹಾಸ ಪುರಾಣಗಳ ಮಿಶ್ರಣವಾದ ಪ್ರಾಚೀನ ಮಹಾಕೃತಿಯೊಂದನ್ನು ಆಧುನಿಕ ಸಾಹಿತ್ಯಪ್ರಕಾರವಾದ ಕಾದಂಬರಿಯನ್ನಾಗಿ ನಿರ್ಮಿಸುವ ಪ್ರಕ್ರಿಯೆಯಲ್ಲಿ, ಶ್ರೇಷ್ಠ ಕಾದಂಬರಿಕಾರರೊಬ್ಬರ ಪಕ್ವವಾದ ಮನಸ್ಸು ಕಾಲ ದೇಶಗಳನ್ನು ದಾಟಿ ಹೇಗೆ ಕೆಲಸ ಮಾಡಿದೆ ಎಂಬುದನ್ನು ಇಲ್ಲಿ ನೋಡಬಹುದು. ಸೃಜನಶೀಲ ಪ್ರತಿಭೆಯ ಸಾಹಸ ಈ ಬೃಹತ್ಕಾದಂಬರಿಯ ಪುಟಪುಟಗಳಲ್ಲಿ  ಸ್ಫುಟಗೊಂಡಿದೆ. ಮೂಲಕೃತಿಯ ಅಲೌಕಿಕ ಅಂಶಗಳಿಂದ ಪಾರಾಗಿ, ಸಾಮಾನ್ಯರನ್ನೂ ಅಸಾಮಾನ್ಯರನ್ನೂ ಒಂದೇ ದೃಷ್ಟಿಯಿಂದ ನೋಡಿ, ಆದರ್ಶ ವಾಸ್ತವತೆಗಳನ್ನು ಮೇಳವಿಸಿ, ಯಾವುದೋ ಕಾಲದ ವ್ಯಕ್ತಿ […]

Read More

ನಿರಾಕರಣ

ಐದು ಪುಟ್ಟ ಮಕ್ಕಳನ್ನು ಸಾಕಲು ಮನೆಯಲ್ಲಿ ಹೆಣ್ಣು ದಿಕ್ಕಿಲ್ಲದ ತಂದೆಯು, ಅವರನ್ನೆಲ್ಲ ದತ್ತು ಕೊಡುವುದಾಗಿ ಮುಂಬೈಯ ಟೈಮ್ಸ್ ಪತ್ರಿಕೆಯಲ್ಲಿ ಜಾಹೀರಾತು ಮಾಡುತ್ತಾನೆ. ‘ಬಂಧನಕ್ಕೆ ಮಿತಿ ಎಂಬುದು ಸುಳ್ಳು. ಅಂಟಿದರೆ ಪೂರ್ತಿಯಾಗಿಯೂ ಸೆಳೆದುಬಿಡುತ್ತದೆ – ವಿದ್ಯುತ್ ಶಾಕ್ ನಂತೆ. ಇಲ್ಲ, ಸ್ಪರ್ಶಕ್ಕೆ ಸಿಕ್ಕದಷ್ಟು ದೂರವೇ ಇರಬೇಕು. ಇದಕ್ಕೆ ಮಧ್ಯಮ ಸ್ಥಿತಿ ಇಲ್ಲ’ ಎಂಬ ಗ್ರಹಿಕೆಯಿಂದ ಅವನು ನಿರ್ಧರಿಸುತ್ತಾನೆ. ‘ನೀರು ಹರಿಯದಿದ್ದಾಗಲೂ ಅದನ್ನು ನದಿ ಅನ್ನಬಹುದೇ?’ ‘ಇಲ್ಲ. ಅದು ಬರೀ ರೂಢಿಯ ಸಂಕೇತ. ಹರಿದರೆ ಮಾತ್ರ ಕಾಲ, ಹೆಪ್ಪುಗಟ್ಟಿದರೆ ಅಲ್ಲ… […]

Read More

ನೆಲೆ

ನೂರ ಎಂಬತ್ತೇಳು ಪುಟಗಳ ಸಂಕ್ಷಿಪ್ತತೆಯಲ್ಲಿ ‘ನೆಲೆ ‘ ಕಾದಂಬರಿಯು ಅರಗಿಸಿಕೊಂಡಿರುವ ಘಟನೆ  ಶೋಧನೆ ಚಿಂತನೆಗಳ ಆಳವಿಸ್ತಾರಗಳು ಅದ್ಭುತವಾಗಿವೆ. ನಿರುದ್ವೇಗದಿಂದ ವಸ್ತುವನ್ನು,ಆ ಮೂಲಕ ಜೀವನವನ್ನು ಇಲ್ಲಿ ನೋಡಿರುವ ರೀತಿಯು ಮಾಗಿ ಪಕ್ವವಾದ ದೊಡ್ಡ ಕಲಾವಿದನಿಗೆ ಮಾತ್ರ ಸಾಧ್ಯವಾಗುವಂಥದು.ಮೃತ್ಯುವಿನ ಅಂಚಿಗೆ ಪ್ರಜ್ಞೆಯು ತಲುಪಿದಾಗ ಮಾತ್ರ ಜೀವನದ ನಿಜವಾದ ಮಾಪನವು ಸಾಧ್ಯವೆಂಬ ಮೂಲಭೂತ  ಮಾತನ್ನು ಈ  ಕೃತಿಯು  ಸಾಕಾರಗೊಳಿಸಿಕೊಂಡಿದೆ.

Read More

ನಾಯಿ-ನೆರಳು

ದೃಶ್ಯಜಗತ್ತಿನ ಒಂದು ವಾಸ್ತವ ಭಾಗವಾಗಿಯೂ ಕೂಡಾ ಇನ್ನೊಂದು ಮಟ್ಟದಲ್ಲಿ ಬೇರೊಂದು ಜಗತ್ತನ್ನೇ ದರ್ಶಿಸುವಂತೆ ಇಲ್ಲಿ ಮೂಡಿರುವ ಪ್ರತೀಕಗಳು ಅತ್ಯಂತ ಸಫಲವಾಗಿ ಅರ್ಥ ಸ್ಥರಗಳ ಒಂದು ಸೌಧವನ್ನು ನಿರ್ಮಿಸುತ್ತವೆ. ವಾಸ್ತವ ಶೈಲಿಯ ನಿರ್ದಿಷ್ಠತೆಯಿಂದಲೇ ಪುರಾಣಕ್ಕೆ ಸಾಧ್ಯವಾಗದ ಅತೀತತೆಯನ್ನು ಆಧುನಿಕ ಯುಗದ ಲೇಖಕರು ಮುಟ್ಟಬಹುದೆಂಬುದನ್ನು ಭೈರಪ್ಪನವರು ಈ ಕೃತಿಯಲ್ಲಿ ಸಾಧಿಸಿ ತೋರಿಸಿದ್ದಾರೆ.

Read More

ಗತಜನ್ಮ

‘ಗತಜನ್ಮ’ ವನ್ನು  ಶ್ರೀ  ಭೈರಪ್ಪನವರು  ತಮ್ಮ ಹೈಸ್ಕೂಲ್  ದಿನಗಳಲ್ಲಿ ಬರೆದಿದ್ದರು.

Read More

Back To Top