Year | : | 1983 |
Publisher | : | Sahitya Bhandara, Bengaluru |
Reprints | : | 11 |
ನೂರ ಎಂಬತ್ತೇಳು ಪುಟಗಳ ಸಂಕ್ಷಿಪ್ತತೆಯಲ್ಲಿ ‘ನೆಲೆ ‘ ಕಾದಂಬರಿಯು ಅರಗಿಸಿಕೊಂಡಿರುವ ಘಟನೆ ಶೋಧನೆ ಚಿಂತನೆಗಳ ಆಳವಿಸ್ತಾರಗಳು ಅದ್ಭುತವಾಗಿವೆ. ನಿರುದ್ವೇಗದಿಂದ ವಸ್ತುವನ್ನು,ಆ ಮೂಲಕ ಜೀವನವನ್ನು ಇಲ್ಲಿ ನೋಡಿರುವ ರೀತಿಯು ಮಾಗಿ ಪಕ್ವವಾದ ದೊಡ್ಡ ಕಲಾವಿದನಿಗೆ ಮಾತ್ರ ಸಾಧ್ಯವಾಗುವಂಥದು.ಮೃತ್ಯುವಿನ ಅಂಚಿಗೆ ಪ್ರಜ್ಞೆಯು ತಲುಪಿದಾಗ ಮಾತ್ರ ಜೀವನದ ನಿಜವಾದ ಮಾಪನವು ಸಾಧ್ಯವೆಂಬ ಮೂಲಭೂತ ಮಾತನ್ನು ಈ ಕೃತಿಯು ಸಾಕಾರಗೊಳಿಸಿಕೊಂಡಿದೆ.