Year | : | 1971 |
Publisher | : | Sahitya Bhandara, Bengaluru |
Reprints | : | 14 |
ಐದು ಪುಟ್ಟ ಮಕ್ಕಳನ್ನು ಸಾಕಲು ಮನೆಯಲ್ಲಿ ಹೆಣ್ಣು ದಿಕ್ಕಿಲ್ಲದ ತಂದೆಯು, ಅವರನ್ನೆಲ್ಲ ದತ್ತು ಕೊಡುವುದಾಗಿ ಮುಂಬೈಯ ಟೈಮ್ಸ್ ಪತ್ರಿಕೆಯಲ್ಲಿ ಜಾಹೀರಾತು ಮಾಡುತ್ತಾನೆ.
‘ಬಂಧನಕ್ಕೆ ಮಿತಿ ಎಂಬುದು ಸುಳ್ಳು. ಅಂಟಿದರೆ ಪೂರ್ತಿಯಾಗಿಯೂ ಸೆಳೆದುಬಿಡುತ್ತದೆ – ವಿದ್ಯುತ್ ಶಾಕ್ ನಂತೆ. ಇಲ್ಲ, ಸ್ಪರ್ಶಕ್ಕೆ ಸಿಕ್ಕದಷ್ಟು ದೂರವೇ ಇರಬೇಕು. ಇದಕ್ಕೆ ಮಧ್ಯಮ ಸ್ಥಿತಿ ಇಲ್ಲ’ ಎಂಬ ಗ್ರಹಿಕೆಯಿಂದ ಅವನು ನಿರ್ಧರಿಸುತ್ತಾನೆ.
‘ನೀರು ಹರಿಯದಿದ್ದಾಗಲೂ ಅದನ್ನು ನದಿ ಅನ್ನಬಹುದೇ?’
‘ಇಲ್ಲ. ಅದು ಬರೀ ರೂಢಿಯ ಸಂಕೇತ. ಹರಿದರೆ ಮಾತ್ರ ಕಾಲ, ಹೆಪ್ಪುಗಟ್ಟಿದರೆ ಅಲ್ಲ… ಉಷ್ಣ ಚಂಚಲ, ಶೀತ ಅಚಲ.’
ಹೆಪ್ಪುಗಟ್ಟಲೇಬೇಕೆಂದು ಬಯಲನ್ನು ನಿರಾಕರಿಸಿ ಬೆಟ್ಟವನ್ನು ಏರುತ್ತಾನೆ.
ಕನ್ನಡ ಕಾದಂಬರೀ ಪ್ರಪಂಚದಲ್ಲಿ ಒಂದು ವಿನೂತನ ಕೃತಿ.