Year | : | 1968 |
Publisher | : | Sahitya Bhandara, Bengaluru |
Reprints | : | 13 |
ಗೋವನ್ನು ಸರ್ವದೇವತೆಗಳ ಸ್ವರೂಪವೆಂದು ಪೂಜಿಸುವ ಕಾಳಿಂಗಜ್ಜ ಮತ್ತು ಅದು ಹಾಲು ಮಾಂಸಗಳನ್ನು ಕೊಡುವ ಪ್ರಾಣಿ ಮಾತ್ರ ಎಂದು ಭಾವಿಸುವ ಆಮೆರಿಕೆಯಿಂದ ಹಿಂತಿರುಗಿದ ಮೊಮ್ಮಗ, ಇವರ ಮೌಲ್ಯಸಂವೇದನೆಗಳ ನಡುವೆ ನಡೆಯುವ ತಿಕ್ಕಾಟವೇ ಈ ಕಾದಂಬರಿಯ ವಸ್ತು.
ಪ್ರಾಯಶಃ ಭಾರತದ ಎಲ್ಲ ಭಾಷೆಗಳಲ್ಲೂ ಪ್ರಚಲಿತವಿರುವ ಗೋವಿನ ಹಾಡಿನ ಹಿನ್ನಲೆಯಲ್ಲಿ ಆರಂಭವಾಗುವ ಕಾದಂಬರಿಯು, ಭಾರತೀಯ ಸಂಸ್ಕೃತಿಯ ಮೂಲ ಬೇರುಗಳನ್ನು ಹಿನ್ನಲೆಯಲ್ಲಿ ಕಾಣಿಸುತ್ತದೆ. ಈ ಕೃತಿಯನ್ನಾಧರಿಸಿ ಕನ್ನಡ ಮತ್ತು ಹಿಂದಿಯಲ್ಲಿ ನಿರ್ಮಿಸಿರುವ ಚಲನ ಚಿತ್ರಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮನ್ನಣೆ ಪಡೆದಿವೆ. ಈ ಕಾದಂಬರಿಯ ಹಿಂದೀ ಅನುವಾದವೂ ಅಪಾರವಾದ ಮೆಚ್ಚುಗೆ ಪಡೆದಿದೆ.
ಇದೊಂದು ಉತ್ಕೃಷ್ಟ ಸಾಹಿತ್ಯಕೃತಿ ಎಂದು ಭಾವಿಸುವವರಿರುವಂತೆಯೇ, ಪ್ರಗತಿವಿರೋಧಿ,ಪ್ರತಿಗಾಮಿ ಮೌಲ್ಯಗಳನ್ನು ಪ್ರತಿಪಾದಿಸುವ ತೀರ ಕಳಪೆ ಕಾದಂಬರಿ ಎಂದು ಇದನ್ನು ದೇಷಿಸುವವರೂ ಇದ್ದಾರೆ. ಪ್ರೀತಿ ದ್ವೇಷಗಳೆರಡನ್ನೂ ಪ್ರಚೋದಿಸುವ ಈ ಗುಣವು ಕಾದಂಬರಿಯ ಶಕ್ತಿಯ ಗುರುತಾಗಿದೆ.